ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ದಟ್ಟವಾದ ಮಂಜಿನ ಪರಿಣಾಮ 80ಕ್ಕೂ ಹೆಚ್ಚು ವಿಮಾನಗಳು ಹಾಗೂ ಹಲವಾರು ರೈಲುಗಳ ಪ್ರಯಾಣದಲ್ಲಿ ವ್ಯತ್ಯಯವಾಗಿದೆ.
ಇಂದು ದೆಹಲಿ-ಎನ್‌ಸಿಆರ್‌ನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಂಜಿನ ಜೊತೆಗೆ ಶೀತ ಹವಾಮಾನ ಪರಿಸ್ಥಿತಿ ಎದುರಾಗಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನ 10.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: ಒಬ್ಬಳು ಯುವತಿ ಸೇರಿ ಏಳು ಮಂದಿ ಮೇಲೆ ಹುಚ್ಚುನಾಯಿ ದಾಳಿ!
ಈ ಸಂಬಂಧ IMD ತನ್ನ ಎಕ್ಸ್ ಖಾತೆಯಲ್ಲಿ ಪಂಜಾಬ್, ಹರಿಯಾಣ, ದೆಹಲಿ ಉತ್ತರ ಪ್ರದೇಶ, ಉತ್ತರ ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದೆ. ಈ ಹಿನ್ನೆಲೆಯಲ್ಲಿ ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಿ. ಚಾಲನೆಯ ವೇಳೆ ವಾಹನದ ಲೈಟ್ ಆನ್ ಮಾಡಿಕೊಳ್ಳಿ. ಇನ್ನು ನಿಮ್ಮ ಪ್ರಯಾಣಕ್ಕಾಗಿ ವಿಮಾನಯಾನ, ರೈಲ್ವೆ ಮತ್ತು ರಾಜ್ಯ ಸಾರಿಗೆಯೊಂದಿಗೆ ಸಂಪರ್ಕದಲ್ಲಿರಿ ಎಂದು ತಿಳಿಸಿದೆ.