Sunday, January 19, 2025

ಸಿದ್ದರಾಮಯ್ಯಗೆ ಬೈದ್ರೆ ವಿಶೇಷ ಸ್ಥಾನಮಾನ ಸಿಗುತ್ತೆ : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೈದರೆ ಒಂದು ವಿಶೇಷ ಸ್ಥಾನಮಾನ ಸಿಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕುಟುಕಿದರು.

ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದ ಶಾಸಕರಿಗೆ ವಿಶೇಷ ಸ್ಥಾನಮಾನ ನೀಡಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅನ್ನೋದು ಖಾತ್ರಿ ಆಯ್ತು. ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು ಎಂದು ಬಿ.ಆರ್ ಪಾಟೀಲ್, ಬಸವರಾಜ ರಾಯರೆಡ್ಡಿ ಮತ್ತು ಆರ್.ವಿ ದೇಶಪಾಂಡೆಗೆ ವಿಶೇಷ ಸ್ಥಾನಮಾನ ನೀಡಲಾಗಿದೆ ಎಂದು ವ್ಯಂಗ್ಯವಾಡಿದರು.

ಸ್ವಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡೆಗೆ ಜೋಶಿ ಕಿಡಿಕಾರಿದರು. ಪಕ್ಷದ ವಿರುದ್ಧ ನೀಡುವ ಬಹಿರಂಗ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು. ನಾನು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಇರಲಿಲ್ಲ. ಆದರೆ, ಯಾರು ಸಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು. ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಕೂಡಲೇ ಬಹಿರಂಗ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ಇದೇ ವೇಳೆ ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆಯೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಸಲು ಪ್ರಲ್ಹಾದ್ ಜೋಶಿ ನಿರಾಕರಿಸಿದರು.

RELATED ARTICLES

Related Articles

TRENDING ARTICLES