Saturday, May 11, 2024

ಕಾಂಗ್ರೆಸ್ ಕನ್ನಡ ವಿರೋಧಿ ಸರ್ಕಾರ : ಪ್ರಮೋದ್ ಮುತಾಲಿಕ್

ಬೆಳಗಾವಿ : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡ ವಿರೋಧಿ ಸರ್ಕಾರ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.

ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿರುವ ವಿಚಾರ ಕುರಿತು ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕನ್ನಡ ಬೋರ್ಡ್ ಹಾಕಿ ಅಂತ ಕನ್ನಡಿಗರು ಹೋರಾಟ ಮಾಡುವ ಅವಶ್ಯಕತೆ ಇಲ್ಲ ಎಂದರು.

ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ದ್ರೋಹ ಮಾಡಿದೆ. ನಾನು ಕಾಂಗ್ರೆಸ್ ಸರ್ಕಾರವನ್ನು ಖಂಡಿಸುತ್ತೇನೆ. ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಯಾವುದೇ ಷರತ್ ಇಲ್ಲದೇ ಬಿಡುಗಡೆ ಮಾಡಬೇಕು ಎಂದು ಮುತಾಲಿಕ್ ಆಗ್ರಹಿಸಿದರು.

ಹಿಂದೂಗಳ ಮೇಲೆ ಕೇಸ್ ಹಾಕೋದು ಸರಿಯಲ್ಲ

ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಪೊಲೀಸ್ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ಶ್ರೀರಂಗಪಟ್ಟಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಯಾವುದೇ ಕಾನೂನು ಬಾಹಿರವಾಗಿ ಮಾತನಾಡಿಲ್ಲ. ವಾಸ್ತವಿಕವಾಗಿರುವುದನ್ನೇ ಅವರು ಹೇಳಿದ್ದಾರೆ. ಅದನ್ನೇ ವಿವಾದಾತ್ಮಕ ಅಂತ ಬಿಂಬಿಸಿ ಪ್ರಕರಣ ದಾಖಲಿಸಿದ್ದು ತಪ್ಪು. ವಾಸ್ತವಿಕವನ್ನ ಒಪ್ಪಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂದು ಹಿಂದೂ ನಾಯಕರ ಮೇರೆ ಕೇಸ್ ಹಾಕುವುದು ಸರಿ ಇಲ್ಲ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲಿನ ಪ್ರಕರಣವನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES