Thursday, December 26, 2024

ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಿಸಬೇಕು: ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ: ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ಸಹ ನಿರ್ಮಾಣವಾಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ  ಹೇಳಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡಲಾಗಿದೆ. ಅದನ್ನು ಸ್ವಾಗತಿಸುತ್ತೇವೆ. ಅಂತೆಯೇ, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಬಳಿ ರಾಮಾಯಣ ಬರೆದ ವಾಲ್ಮೀಕಿ ಮಂದಿರವನ್ನೂ ನಿರ್ಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತರಷ್ಟೇ ಈ ರಾಜ್ಯದ ಪ್ರಜೆಗಳೇ? : ಸಿಎಂ ವಿರುದ್ಧ ಯತ್ನಾಕ್ ಕಿಡಿ

ಹಿಜಾಬ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ, “ಹಿಜಾಬ್ ವಿಚಾರದಲ್ಲಿ ಸರ್ಕಾರ ಯಾವುದೇ ಆದೇಶ ನೀಡಿಲ್ಲ. ಹಿಜಾಬ್ ಧರಿಸುವುದು, ಬಿಡುವುದು ಅದನ್ನು ಧರಿಸುವವರಿಗೆ ಬಿಟ್ಟ ವಿಷಯ.

ಹಿಜಾಬ್ ಧರಿಸುವುದು ನಡೆದುಕೊಂಡು ಬಂದಿದೆ ನಡೆದುಕೊಂಡು ಹೋಗಲಿ” ಎಂದಿದ್ದಾರೆ.

 

RELATED ARTICLES

Related Articles

TRENDING ARTICLES