Monday, December 23, 2024

ಹೊಸ ವರ್ಷದ ಮೊದಲ ವಾರ ಭಾರಿ ಮಳೆ ಸಾಧ್ಯತೆ!

ಬೆಂಗಳೂರು:  2023ರ ವರ್ಷಾಂತ್ಯ ಹಾಗು 2024 ವರ್ಷಾರಂಭದಲ್ಲಿ ತೀವ್ರವಾದ ಚಳಿ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿ.31 ರಂದು ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬೆಳಗ್ಗೆ ಹಾಗೂ ಸಂಜೆ ಚಳಿ ತೀವ್ರತೆ ಹೆಚ್ಚಾಗಲಿದೆ. ಆಗಾಗ ಸೂರ್ಯ ತನ್ನ ದರ್ಶನ ನೀಡಲಿದ್ದಾನೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆ ಸಾಧ್ಯತೆ ಇದ್ದರೆ, ಉತ್ತರ ಒಳನಾಡಲ್ಲಿ ಚಳಿ ವಾತಾವರಣ ಇರಲಿದೆ.

ಮುಂಬರುವ ದಿನಗಳಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜಿಟಿ ಜಿಟಿ ಮಳೆ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: 15 ದಿನಗಳ ಕಾಲ ಮಾಲ್ ಆಫ್ ಏಷ್ಯಾ ಬಂದ್!

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚಳಿ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ವಿಜಯನಗರದಲ್ಲೂ ಯಥಾಸ್ಥಿತಿ ಇರಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರಲಿದೆ. ಇದರಿಂದಾಗಿ ಚಳಿಯು ಗಡಗಡ ನಡುಗಿಸಲಿದೆ.

RELATED ARTICLES

Related Articles

TRENDING ARTICLES