Wednesday, January 22, 2025

ಹಿಂದೂ ಸಮಾಜ ಮಸೀದಿಗಳನ್ನ ಒಡೆದು ಪುಡಿ ಪುಡಿ ಮಾಡುತ್ತೆ : ಈಶ್ವರಪ್ಪ

ಚಿಕ್ಕೋಡಿ : ಹಿಂದೂ ಸಮಾಜ ಮಸೀದಿಗಳನ್ನ ಒಡೆದು ಪುಡಿ ಪುಡಿ ಮಾಡುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಶ್ರೀರಾಮಸೇನೆಯಿಂದ ಹಮ್ಮಿಕೊಂಡಿದ್ದ ‘ಮೋದಿ ಗೆಲ್ಲಿಸಿ.. ಭಾರತ ಉಳಿಸಿ’ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಮುಸ್ಲಿಮರು ಎಲ್ಲೆಲ್ಲಿ ದೇವಸ್ಥಾನ‌ ಒಡೆದು ಮಸೀದಿ ನಿರ್ಮಿಸಿದ್ದೀರಿ. ಮರ್ಯಾದೆಯಿಂದ ಮಸೀದಿಗಳನ್ನ ತೆಗೆದುಕೊಳ್ಳಿ. ಇಲ್ಲವಾದಲ್ಲಿ ಅವುಗಳನ್ನು ಒಡೆದು ಪುಡಿ ಪುಡಿ ಮಾಡಲಾಗುವುದು ಎಂದು ಪ್ರಚೋದನಾತ್ಮಕ ಹೇಳಿಕೆ ಹರಿಬಿಟ್ಟಿದ್ದಾರೆ.

ಮೋದಿ ಪ್ರಧಾನಿ ಆಗಿ ಬರಲಿ ಎಂದು ಬಯಸುತ್ತಿದ್ದಾರೆ

ದೇಶದಲ್ಲಿ ಶ್ರೀರಾಮನ ಬಗ್ಗೆ ಚರ್ಚೆ ಆಗುತ್ತಿದೆ. ನಮ್ಮನ್ನ ವಿರೋಧ ಮಾಡಿದವರ ಹೊಟ್ಟೆಯಲ್ಲಿ ಕಸವಿಸಿ ಆಗುತ್ತಿದೆ. ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ‌. ಪಾಕಿಸ್ತಾನ ದೇಶದವರು ಮೋದಿ ಪ್ರಧಾನಿ ಆಗಿ ಬರಲಿ ಎಂದು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಶಿ, ಮಧುರಾ ದೇವಸ್ಥಾನವೂ ಶೀಘ್ರ ನಿರ್ಮಾಣ

ಮಧುರಾ, ಕಾಶಿ ದೇವಸ್ಥಾನಗಳ ಕಾರ್ಯ ಸರ್ವೆ ಮಾಡುತ್ತೇವೆ. ನ್ಯಾಯಾಲಯದ ಮುಖಾಂತರ ಸರ್ವೆ ಕಾರ್ಯ ನಡೆಯುತ್ತಿದೆ. ಕಾಶಿ ವಿಶ್ವನಾಥ, ಮಧುರಾ ಶ್ರೀಕೃಷ್ಣ ದೇವಸ್ಥಾನವೂ ಶೀಘ್ರದಲ್ಲಿ ನಿರ್ಮಾಣ ಆಗುತ್ತವೆ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES