Sunday, December 22, 2024

ನೋಯ್ಡಾದಲ್ಲಿ ಹೊಸ ವರ್ಷಾಚರಣೆಗಿಲ್ಲ ಅನುಮತಿ!

ಉತ್ತರಪ್ರದೇಶ : ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಉತ್ತರ ಪ್ರದೇಶದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾ ಪ್ರದೇಶಗಳಲ್ಲಿ ಡಿಸೆಂಬರ್ 31 ಮತ್ತು ಜನವರಿ 1 ರಂದು 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಸಾಮೂಹಿಕ ಧಾರ್ಮಿಕ ಪ್ರಾರ್ಥನೆಗಳನ್ನು ಮಾಡುವಂತಿಲ್ಲ. ಸಾರ್ವಜನಿಕವಾಗಿ ಮದ್ಯ ಸೇವನೆ ಮತ್ತು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪೊಲೀಸರ ಅನುಮತಿ ಇಲ್ಲದೆ ಎರಡೂ ಪ್ರದೇಶಗಳಲ್ಲಿ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್​​​​ ಹಾರಿಸುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಗೌತಮ ಬುದ್ದನಗರ ಪೊಲೀಸರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: 15 ದಿನಗಳ ಕಾಲ ಮಾಲ್ ಆಫ್ ಏಷ್ಯಾ ಬಂದ್!

ಹೊಸ ವರ್ಷಾಚರಣೆಯ ಪರ ಮತ್ತು ವಿರೋಧ ಪ್ರತಿಭಟನೆಗಳನ್ನು ನಡೆಸುವುದಾಗಿ ಹಲವು ಸಂಘಟನೆಗಳು ಘೋಷಣೆ ಮಾಡಿದ್ದರಿಂದ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಯನ್ನು ವಿರೋಧಿಸಿ ಕೆಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನೋಯ್ಡಾ ಮತ್ತು ಗ್ರೇಟರ್ ನೋಯ್ಡಾಗಳಲ್ಲಿ ಕರ ಪತ್ರ ಹಂಚಿ ಅಭಿಯಾನ ನಡೆಸಿದ್ದರು. ಇದನ್ನು ಪ್ರಗತಿಪರ ಸಂಘಟನೆಗಳು ವಿರೋಧಿಸಿದ್ದವು.

RELATED ARTICLES

Related Articles

TRENDING ARTICLES