Sunday, December 22, 2024

ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

ಬೆಂಗಳೂರು : ಹಾಸನದಲ್ಲಿ ಮರ ಕಡಿದ ಪ್ರಕರಣ ಆರೋಪದಡಿ ಬಂಧನವಾಗಿದ್ದ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಜಾಮೀನು ಸಿಕ್ಕಿದೆ.

ಆರೋಪಿ ವಿಕ್ರಂ ಸಿಂಹ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಕೀಲ ಚಂದ್ರೇಗೌಡ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಬೇಲೂರು ಸಿವಿಲ್ ನ್ಯಾಯಾಧೀಶ ಪ್ರಕಾಶ್ ನಾಯ್ಕ್ ಅವರು ಜಾಮೀನು ಮಂಜೂರು ಮಾಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ವಿಕ್ರಂ ಸಿಂಹ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿನ್ನೆ ವಿಕ್ರಂ ಸಿಂಹರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಅರಣ್ಯ ಭವನದಲ್ಲಿ ವಿಚಾರಣೆ ನಡೆಸಿದ್ದರು.

ಕೋಟ್ಯಂತರ ರೂಪಾಯಿ ಬೆಲೆ ಬಾಳುವ 126ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಆರೋಪದಲ್ಲಿ ವಿಕ್ರಂ ಸಿಂಹ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮರ ಕಡಿದ ಸ್ಥಳಗಳಲ್ಲಿ ಅಲ್ಲಿನ ತಹಸೀಲ್ದಾರರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

RELATED ARTICLES

Related Articles

TRENDING ARTICLES