ಬೆಂಗಳೂರು: 2024ನೇ ವರ್ಷವನ್ನ ಸ್ವಾಗತಿ ಸಿಲಿಕಾನ್ ಸಿಟಿ ಸಜ್ಜಾಗಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾ ನಗರ ಸೇರಿ ನಗರದ ಪ್ರಮುಖ ರಸ್ತೆಗಳು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ಪಬ್ ಮತ್ತು ಹೋಟೆಲ್‌ಗಳತ್ತ ಜನರು ಬರುತ್ತಿದ್ದಾರೆ.
ಇನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರದೆಲ್ಲಡೆ ಪೊಲೀಸ್ ಬಿಗಿ ಭದ್ರತೆ ಕೂಡ ಏರ್ಪಡಿಸಲಾಗಿದೆ.
ಪೊಲೀಸ್ ಬಿಗಿ ಭದ್ರತೆ
ಬ್ರಿಗೇಡ್-ಎಂ.ಜಿ.ರಸ್ತೆಗಳ ವ್ಯಾಪ್ತಿಯಲ್ಲಿ 4 ಡಿಸಿಪಿಗಳು, 10 ಎಸಿಪಿಗಳು, 30 ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಒಟ್ಟು 3 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. 250 ಸಿಸಿಟಿವಿ ಕ್ಯಾಮೆರಾಗಳು ಹಾಗೂ 16 ವೀಕ್ಷಣಾ ಗೋಪುರಗಳ ಮೂಲಕ ಹದ್ದಿನ ಕಣ್ಣು, 18 ಮಹಿಳಾ ಸುರಕ್ಷತಾ ತಾಣ ಸ್ಥಾಪನೆ ಮಾಡಲಾಗಿದೆ.
ಮಹಿಳೆಯರ ಸುರಕ್ಷತೆಗಾಗಿ ಅಲ್ಲಲ್ಲಿ ಸೇಫ್ಟಿ ಐಲ್ಯಾಂಡ್ ನಿರ್ಮಾಣ, ರಸ್ತೆ ಜಂಕ್ಷನ್‌ಗಳಲ್ಲಿ ತಾತ್ಕಾಲಿಕ ಸಿಸಿಟಿವಿ ಅಳವಡಿಕೆ, ಮೊಬೈಲ್ ಕಮಾಂಡ್ ಸೆಂಟರ್ ಜೊತೆಗೆ ತಾತ್ಕಾಲಿಕ ಕಂಟ್ರೋಲ್ ರೂಂ ವ್ಯವಸ್ಥೆ ಮಾಡಲಾಗಿದ್ದು, ಬ್ಯಾರಿಕೇಡ್ ಹಾಕಿ ವ್ಹೀಲಿಂಗ್, ರ‍್ಯಾಷ್ ಡ್ರೈವ್ ಮಾಡುವವರ ಮೇಲೂ ಪೊಲೀಸ್ ಕಣ್ಗಾವಲು ಇಡಲಾಗಿದೆ.