Sunday, February 23, 2025

ರಾಹುಲ್ ಗಾಂಧಿಯನ್ನು ನೇಣಿಗೆ ಏರಿಸಬೇಕು : ಸಿದ್ದಲಿಂಗ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ನೇಣಿಗೆ ಏರಿಸಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೇರಳದಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದರು. ಭಾರತ್ ಜೋಡೋ ಮುಗಿಯುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಮುಖ ಇರಾನಿನ್ ಸದ್ದಾಂ ಹುಸೇನ್ ತರಹ ಕಾಣುತ್ತಿತ್ತು. ರಾಹುಲ್ ಗಾಂಧಿ ಗಡ್ಡ ಬಿಟ್ಕೊಂಡು ಥೇಟ್ ಸದ್ದಾಂ ಹುಸೇನ್ ತರ ಕಾಣುತ್ತಿದ್ದರು. ಇನ್ನು ಏನೇ ಇದ್ದರೂ ರಾಹುಲ್ ಗಾಂಧಿಯನ್ನು ನೇರವಾಗಿ ನೇಣಿಗೆ ಏರಿಸಬೇಕು ಅಂತ. 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ನೇಣಿಗೆ ಏರಿಸಬೇಕು ಎಂದು ಸಿದ್ದಲಿಂಗ ಸ್ವಾಮೀಜಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES