Wednesday, January 22, 2025

ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ : ಚೆಕ್ ಬೌನ್ಸ್ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಎಬಿವಿಪಿ ಆಗ್ರಹಿಸಿದೆ.

ನಗರದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ ಮಾತನಾಡಿ, ಭಾರತದ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣವೊಂದೇ ಪರಿಹಾರ ಎಂದು ನಾವು ನಂಬಿದ್ದೇವೆ. ಆದರೆ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಶಿಕ್ಷಣ ಸಚಿವನಾಗಿ ಮುಂದುವರಿಯುವುದು ವಿಪರ್ಯಾಸದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಸಚಿವ ಮಧು ಬಂಗಾರಪ್ಪ ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕಿ ತಂದಿದ್ದಾರೆ. ಅವರು ಈ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

RELATED ARTICLES

Related Articles

TRENDING ARTICLES