Monday, December 23, 2024

ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಸಹ ರಾಮ ವಿರೋಧಿ : ಸುನೀಲ್ ಕುಮಾರ್

ಬೆಂಗಳೂರು : ರಾವಣ ಮಾತ್ರ ಅಲ್ಲ, ಸಿಎಂ ಸಿದ್ದರಾಮಯ್ಯ ಸಹ ಶ್ರೀರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಸಿಎಂ ವಿರುದ್ದ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಟ್ಟಿ ಕೊಡುತ್ತೇನೆ. ನಿಮಗೆ ತಾಕತ್ ಇದ್ದರೆ ಕರಸೇವಕರನ್ನು ಬಂಧಿಸಿ, ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಮ ಮಂದಿರ ಉದ್ಘಾಟನೆಯಿಂದ ಇಡೀ ದೇಶ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ ಎಂಬಾತನ ಬಂಧನದ ಮೂಲಕ ಅಪಶಕುನ ಮಾಡುತ್ತಿದ್ದಾರೆ. ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಿ. ಇನ್ನು ಮನೆ ಮನೆಗಳಲ್ಲಿ ದೀಪ ಬೆಳಗಿಸಿ ಎಂದು ಪ್ರಧಾನಿ ಕರೆ ಕೊಟ್ಟಿದ್ದಾರೆ. ಅದರಂತೆ ಸಿಎಂ ಹಾಗೂ ಸಚಿವರು ಕೂಡ ತಮ್ಮ ಮನೆಯಲ್ಲಿ ನಂದಾ ದೀಪ ಬೆಳಗಿಸಲಿ, ಸಿಎಂ ಕೂಡ ತಮ್ಮ ಕುಟುಂಬ ಸದಸ್ಯರ ಜೊತೆ ಸೇರಿ ದೀಪ ಹಚ್ಚಲಿ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES