Thursday, January 16, 2025

ಜ.3ರಿಂದ ‘ಬಾಗಿಲಿಗೆ ಬಂತು ಸರ್ಕಾರ’ ಕಾರ್ಯಕ್ರಮ : ಸಿದ್ದರಾಮಯ್ಯ

ಬೆಂಗಳೂರು : ಜನವರಿ 3, 5 ಹಾಗೂ 6ರಂದು ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರಿಗರ ಸಮಸ್ಯೆಗಳನ್ನು, ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ತಿಂಗಳ 3, 5 ಹಾಗೂ 6ನೇ ತಾರೀಖಿನಂದು ಬೆಂಗಳೂರು ನಗರ ವ್ಯಾಪ್ತಿಯ ಕೆ.ಆರ್‌ ಪುರ, ಮಹದೇವಪುರ, ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರ, ಶಿವಾಜಿನಗರ, ಹೆಬ್ಬಾಳ ಹಾಗೂ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಅಲ್ಲದೆ, ಕಾಲಮಿತಿಯೊಳಗೆ ಪರಿಹಾರ ಕಲ್ಪಿಸಲು ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಸಂಪೂರ್ಣ ಸದುಪಯೋಗ ಪಡೆಯಿರಿ

ಬೆಂಗಳೂರಿನ ನಿವಾಸಿಗಳು ನಿಮ್ಮ ಸಮಸ್ಯೆಯ ಇತ್ಯರ್ಥಕ್ಕೆ ಸರ್ಕಾರದ ನೆರವಿನ ಅಗತ್ಯವಿದ್ದಲ್ಲಿ, ಈ ಕಾರ್ಯಕ್ರಮದ ಅವಕಾಶದ ಸಂಪೂರ್ಣ ಸದುಪಯೋಗ ಪಡೆಯಿರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES