Saturday, January 11, 2025

ಬಿಜೆಪಿಗರು ಚುನಾವಣೆ ಹತ್ತಿರ ಬಂದಾಗ ಏನಾದ್ರು ಗಿಮಿಕ್ ಮಾಡ್ತಾರೆ : ಯತೀಂದ್ರ ಸಿದ್ದರಾಮಯ್ಯ

ದಾವಣಗೆರೆ : ಬಿಜೆಪಿಯವರು ಚುನಾವಣೆ ಹತ್ತಿರ ಬಂದಾಗ ಏನಾದರೂ ಗಿಮಿಕ್ ಮಾಡ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕುಟುಕಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯವರು ಅಧಿಕಾರಕ್ಕಾಗಿ ಯಾವುದೇ ಕೆಳಮಟ್ಟಕ್ಕೆ ಇಳಿಯುವುದಕ್ಕೂ ರೆಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಪುಲ್ವಾಮ್ ಮಾಡಿದ್ರು, 2014ಕ್ಕೂ ಮುಂಚೆ ಗೋದ್ರಾ ಹತ್ಯಾಕಾಂಡ ಮಾಡಿ ರಾಜಕೀಯ ಲಾಭ ಪಡೆದುಕೊಂಡು ಅಧಿಕಾರಕ್ಕೆ ಬಂದ್ರು. ಈ ಘಟನೆಗಳ ಹಿನ್ನಲೆಯಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ರಾಮಮಂದಿರ ಎಲ್ಲಾ ಹಿಂದೂಗಳಿಗೂ ಸೇರಿದ್ದು, ಒಂದು ಪಕ್ಷಕ್ಕೆ ಸೇರಿದ್ದಲ್ಲ. ಅದನ್ನು ಬಿಜೆಪಿಯವರು ಒಂದು ಪಕ್ಷದ ಕಾರ್ಯಕ್ರಮ ಎಂದು ಬಿಂಬಿಸುತ್ತಿದ್ದಾರೆ ಎಂದು ಚಾಟಿ ಬೀಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು

ಧರ್ಮವನ್ನು, ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಅಯೋಧ್ಯೆ ವಿಷಯವನ್ನು ರಾಜಕೀಯವಾಗಿ ಬಳಸಿಕೊಂಡು ಅವರಿಗೆ ಬೇಕಾದವರಿಗೆ ಮಾತ್ರ ಆಹ್ವಾನ ಮಾಡಿದ್ದಾರೆ. ಧರ್ಮ ಮುಖ್ಯವಲ್ಲ, ಸರ್ಕಾರಗಳಿರೋದು ಜನರ ಕೆಲಸ ಮಾಡಲಿಕ್ಕೆ. ಜನ ಎಲ್ಲವನ್ನು ಗಮನಿಸುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES