Monday, December 23, 2024

ಫೆ.29ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ!

ಬೆಂಗಳೂರು: ಫೆಬ್ರವರಿ 29ರಿಂದ ಮಾರ್ಚ್ 7ವರೆಗೂ ಬೆಂಗಳೂರಿನಲ್ಲಿ ಚಲನಚಿತ್ರೋತ್ಸವ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆವೃತ್ತಿಯಾಗಿದೆ. ದೇಶ ವಿದೇಶಗಳಲ್ಲಿ ಈ ಚಲನಚಿತ್ರೋತ್ಸವ ಮನ್ನಣೆ ಪಡೆದಿದ್ದು ಮಾರ್ಚ್ 7ರಂದು  ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯಪಾಲರು ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದ್ದಾರೆ.

ಇದನ್ನೂ ಓದಿ: ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿ ಸರ್ಕಾರ ಆದೇಶ!

ಈ ಚಿತ್ರೋತ್ಸವ ಸಂಬಂಧ ಕೋರ್ ಕಮಿಟಿ ರಚನೆ ಮಾಡಲಾಗಿದೆ. ವಿದೇಶದಿಂದ ಉತ್ತಮ ಚಿತ್ರಗಳನ್ನ ತರಿಸುತ್ತೇವೆ, ಸಮಾನತೆ, ಶಾಂತಿ ಸೌಹಾರ್ದತೆ ಬಗ್ಗೆ ಸಾರುವ ಚಿತ್ರಗಳ ಪ್ರದರ್ಶನ ನಡೆಯುತ್ತೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES