Sunday, January 26, 2025

ಆಂಧ್ರ ಸಿಎಂ ಸಹೋದರಿ ವೈ.ಎಸ್.ಶರ್ಮಿಳಾ ರೆಡ್ಡಿ ಕಾಂಗ್ರೆಸ್‌ ಸೇರ್ಪಡೆ

ನವದೆಹಲಿ: ವೈಎಸ್‌ಆರ್‌ ತೆಲಂಗಾಣ ಕಾಂಗ್ರೆಸ್ ಪಕ್ಷದ ಸಂಸ್ಥಾಪಕಿ ವೈಎಸ್‌ ಶರ್ಮಿಳಾ ನವದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ನಾಯಕ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೈ ಎಸ್‌ ಶರ್ಮಿಳಾ, ಕಾಂಗ್ರೆಸ್ ದೇಶದ ಅತಿ ದೊಡ್ಡ ಜಾತ್ಯತೀತ ಪಕ್ಷವಾಗಿದ್ದು ಎಲ್ಲ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ ಹಾಗೂ ಎಲ್ಲ ವರ್ಗದ ಜನರನ್ನು ಒಂದುಗೂಡಿಸುತ್ತದೆ. ತಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ತಾವು ಅದನ್ನು ಪರಿಪೂರ್ಣವಾಗಿ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

“ನಮ್ಮ ತಂದೆಯವರ ಕನಸು ರಾಹುಲ್‌ ಗಾಂಧಿ ಪ್ರಧಾನಿಯಾಗುವುದನ್ನು ನೋಡುವುದಾಗಿತ್ತು. ತಾವು ನಮ್ಮ ತಂದೆಯ ಕನಸಿಗೆ ತಮ್ಮ ಕೊಡುಗೆಯನ್ನು ನೀಡುವುದಾಗಿ” ತಿಳಿಸಿದರು.

ತೆಲಂಗಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಶರ್ಮಿಳಾ ಅವರು ತಮ್ಮ ನಿಕಟಪೂರ್ವ ಪಕ್ಷ ವೈಎಸ್‌ಆರ್‌ ತೆಲಂಗಾಣ ಕಾಂಗ್ರೆಸ್‌ ಎಲ್ಲೂ ಕಣಕ್ಕಿಳಿಸದೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು.

RELATED ARTICLES

Related Articles

TRENDING ARTICLES