Monday, May 20, 2024

ಹುಟ್ಟಿದ ಮಾರನೇ ದಿನವೇ ಗಂಡು ಮಗು ಮಾರಾಟ!

ಹಾಸನ: ಜಿಲ್ಲೆ ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿಯಲ್ಲಿ ಗಂಡು ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಲಾಗಿದೆ.

ತನಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆಂದು ಹುಟ್ಟಿದ ಮಾರನೇ ದಿನವೇ ಗಿರಿಜಾ ಎಂಬಾಕೆ ಗಂಡು ಮಗುವನ್ನು ಚಿಕ್ಕಮಗಳೂರಿನ ಮಹಿಳೆಗೆ ಮಾರಾಟ ಮಾಡಿದ್ದಾರೆ. ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕರ್ಯಕರ್ತೆ ಸುಮಿತ್ರಾ, ಮಗುವನ್ನು ಕೊಂಡ ಮಹಿಳೆ ಉಷಾ ಹಾಗೂ ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರ ಬಂಧಿಸಲಾಗಿದೆ.

ಇದನ್ನೂ ಓದಿ: ರಾಮಲಲ್ಲಾ ಪ್ರತಿಷ್ಠಾಪನೆ ವೇಳಾಪಟ್ಟಿ ಬಿಡುಗಡೆ!

2023ರ ನವೆಂಬರ್ 15 ರಂದು ಸಕಲೇಶಪುರ ತಾಲೂಕಿನ ಹೆತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಗಂಡುಮಗುವಿಗೆ ಗಿರಿಜಾ ಜನ್ಮ ನೀಡಿದ್ದರು. ನವೆಂಬರ್ 16 ರಂದು ಚಿಕ್ಕಮಗಳೂರು ಮೂಲದ ಉಷಾ ಎಂಬ ಮಹಿಳೆಗೆ ಮಗುವನ್ನು ಹಸ್ತಾಂತರಿಸಿದ್ದಾರೆ. ಅನಧಿಕೃತವಾಗಿ ಮಗು ಹಸ್ತಾಂತರ ಆಗಿರೋ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಸಲ್ಲಿಕೆಯಾಗಿತ್ತು.

ದೂರು ಆಧರಿಸಿ ಮಕ್ಕಳ ರಕ್ಷಣಾ ಅಧಿಕಾರಿ ಕಾಂತರಾಜ್ ನೇತೃತ್ವದ ತಂಡ ಆರೋಪಿಗಳ ಕಳ್ಳಾಟ ಬಯಲು ಮಾಡಿದೆ. ಜನವರಿ 2 ರಂದು ಮಕ್ಕಳ ರಕ್ಷಣಾ ಅಧಿಕಾರಿ ಕಾಂತರಾಜ್​ ಪೊಲೀಸರಿಗೆ ದೂರು ನೀಡಿದ್ದಾರೆ. ಮಗುವನ್ನು ಹಾಸನ ಮಕ್ಕಳ ರಕ್ಷಣಾ ಘಟಕದಲ್ಲಿ ಇರಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES