Wednesday, January 22, 2025

ಕ್ರಿಕೆಟ್ ದೇವರು ಸಚಿನ್​ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ರಾಷ್ಟ್ರ ರಾಜಧಾನಿ ದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿ ಮಾಡಿದ್ದಾರೆ.

ಸಚಿನ್ ಅವರನ್ನು ಭೇಟಿಯಾದ ಸಂತಸವನ್ನು ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಹೇಳಿದ್ದಾರೆ.

ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರದ ಮಾಜಿ ಹಣಕಾಸು ಸಚಿವರಾದ ಪಿ. ಚಿದಂಬರಂ ಅವರ ಅಧ್ಯಕ್ಷತೆಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಣಾಳಿಕೆ ಸಮಿತಿಗೆ ಅಗತ್ಯ ಸಲಹೆಗಳನ್ನು ನೀಡಿದ್ದಾರೆ.

RELATED ARTICLES

Related Articles

TRENDING ARTICLES