Monday, December 23, 2024

ನಾನೂ ರಾಮ ಭಕ್ತ, ರಾಮನನ್ನ ಮನೆ ದೇವರು ಅಂತ ಪೂಜಿಸ್ತೇನೆ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

ಚನ್ನಪಟ್ಟಣ : ನಾನೂ ಕೂಡ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ. ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ವಿ. ಅದನ್ನ ಭಕ್ತಿ ಪೂರ್ವಕವಾಗಿ ಮಾಡೇ ಮಾಡ್ತೀವಿ ಎಂದು ಕಾಂಗ್ರೆಸ್​ ಶಾಸಕ ಹೆಚ್​.ಎ. ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡ್ತೇನೆ ಎಂದು ತಿಳಿಸಿದ್ದಾರೆ.

ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ, ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ಆದರೆ, ಕಾಂಗ್ರೆಸ್​ಗೆ ತನ್ನದೇ ಆದ ಬದ್ಧತೆ, ಸಿದ್ದಾಂತ ಇದೆ ಎಂದು ಹೇಳಿದ್ದಾರೆ.

ಅವ್ರಿಗೆ ರಾಮನ ಪೂಜೆ ಹೊಸದಿರಬಹದು

ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಾಡ್ತಿದ್ದಾರೋ, ಇಲ್ವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರೋ ವಿಚಾರ. ಆದರೆ, ನಾವು ರಾಮನನ್ನ ಮನೆ ದೇವರು ಅಂತ ಪೂಜೆ ಮಾಡ್ತೀವಿ. ಅವರಿಗೆ ರಾಮನ ಪೂಜೆ ಹೊಸದಿರಬಹದು. ಆದರೆ, ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ತಿದ್ದಾರೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES