Wednesday, January 22, 2025

ಧಗ ಧಗನೇ ಹೊತ್ತಿ ಉರಿದ ಫೋರ್ಡ್ ಐಕಾನ್ ಕಾರು

ತುಮಕೂರು : ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಕಾರೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಹೊಸಪಾಳ್ಯ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.

ಗುಬ್ಬಿಯಿಂದ ತುಮಕೂರು ಕಡೆಗೆ ಹೊರಟಿದ್ದ ಫೋರ್ಡ್ ಐಕಾನ್ ಕಂಪೆನಿಯ ಕಾರು ಚಲಿಸುತ್ತಲೇ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಬೆಂಕಿ ನಂದಿಸುವ ಕೆಲಸ ಮಾಡಿದರು ಸಾಧ್ಯವಾಗದಾಗ ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಹೊತ್ತಿಗಾಗಲೇ ಕಾರು ಬಹುತೇಕ ಸುಟ್ಟು ಕರಕಲಾಗಿದೆ. ಸದ್ಯ ಈ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES