Wednesday, January 22, 2025

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಗೆಲುವು

ಬೆಂಗಳೂರು : ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೊದಲ ಟೆಸ್ಟ್​ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಂಡಿತು.

ಕೇಪ್​ಟೌನ್​ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ದಕ್ಷಿಣ ಆಫ್ರಿಕಾ ತಂಡ ನೀಡಿದ್ದ 79 ರನ್ಗಳ ಸುಲಭ ಗುರಿಯನ್ನು 12 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಈ ಮೂಲಕ ಎರಡು ಟೆಸ್ಟ್​ಗಳ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಭಾರತದ ಪರ ಯಶಸ್ವಿ ಜೈಸ್ವಾಲ್ 28, ಶುಭ್​ಮನ್ ಗಿಲ್ 10, ವಿರಾಟ್ ಕೊಹ್ಲಿ 12, ನಾಯಕ ರೋಹಿತ್ ಶರ್ಮಾ ಅಜೇಯ 17 ಹಾಗೂ ಶ್ರೇಯಸ್ ಅಯ್ಯರ್ ಅಜೇಯ 4 ರನ್​ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ, ನಂದ್ರೆ ಬರ್ಗರ್ ಹಾಗೂ ಜಾನ್ಸನ್ ತಲಾ ಒಂದು ವಿಕೆಟ್ ಪಡೆದರು.

ಇನ್ನೂ 2011ರಲ್ಲಿ ಕೊನೆಯ ಬಾರಿ 1-1ರಲ್ಲಿ ಸರಣಿ ಡ್ರಾ ಮಾಡಿಕೊಂಡಿದ್ದ ಭಾರತ ಬಳಿಕ, 2013, 2018, 2021-22ರಲ್ಲಿ ಸರಣಿ ಸೋತಿತ್ತು. ಇದೀಗ (2024) 1-1ರಲ್ಲಿ ಸರಣಿ ಡ್ರಾ ಮಾಡಿಕೊಂಡಿದೆ.

RELATED ARTICLES

Related Articles

TRENDING ARTICLES