Sunday, December 22, 2024

ಹೆಂಡ್ತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್​ಮೇಲ್​ ಮಾಡಿದ ಪತಿರಾಯ 

ಬೆಳಗಾವಿ: ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು.ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ, ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು.

ಗಂಡನ ಬೆದರಿಕೆಯಿಂದ ಭೀತಿಗೊಂಡ ಪತ್ನಿ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದರೂ ಪ್ರಯೋಜನವಾಗಿಲ್ಲ. ಪತಿ ಕಿರಣ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದನು. ಅಷ್ಟಕ್ಕೂ ಸುಮ್ಮನಾಗದ ಆತ, ಪತ್ನಿಗೆ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುವುದನ್ನು ಮುಂದುವರಿಸಿದ್ದನು.

ಇದರಿಂದ ದಿಕ್ಕೆ ತೋಚದಂತಾದಾಗ ಮಹಿಳೆ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾಳೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಿರಣ್​ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆತನ ಮೊಬೈಲ್​ನಲ್ಲಿ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಇಂದು ನಂಜನಗೂಡು ಬಂದ್​​​ಗೆ ಕರೆ; ಉಲ್ಟಾ ಹೊಡೆದ್ರಾ ಅರ್ಚಕರು?

ಆರೋಪ ಸಾಬೀತಾಗುತ್ತಿದ್ದಂತೆ ಪೊಲೀಸರು ಬಂಧಿಸಲು ಮುಂದಾದಾಗ ಕಿರಣ್ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಆತನನ್ನ ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು. ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕಿರಣ್​ನನ್ನು ಪೊಲೀಸರು ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

 

 

 

 

RELATED ARTICLES

Related Articles

TRENDING ARTICLES