Saturday, January 18, 2025

ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು

ಬೆಂಗಳೂರರು : ರಾಮಜನ್ಮ ಭೂಮಿ ಗಲಭೆ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿದೆ.

31 ವರ್ಷಗಳ ಹಿಂದೆ ಬಾಬ್ರಿ ಮಸೀದಿ ದ್ವಂಸ ಹಿನ್ನೆಲೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಇತ್ತೀಚೆಗೆ ಶ್ರೀಕಾಂತ್ ಪೂಜಾರಿ ಬಂಧನವಾಗಿದ್ದರು.

ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿನ್ನೆ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಅವರು ಷರತ್ತು ಬದ್ಧ ಜಾಮೀನು ಮಂಜೂರು ನೀಡಿ ಆದೇಶಿಸಿದೆ. ಆರೋಪಿ ಪರವಾಗಿ ವಕೀಲರಾದ ಬಡಸ್ಕರ ಹಾಗೂ ಅಶೋಕ ಅಣ್ವೇಕರ್ ವಾದ ಮಂಡಿಸಿದ್ದರು. ಸರ್ಕಾರದ ಪರವಾಗಿ ಅಮರಾವತಿ ಬಿ.ಎನ್. ವಾದ ಮಂಡಿಸಿದ್ದರು.

ಶ್ರೀಕಾಂತ್ ಪೂಜಾರಿ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ವಿಚಾರವಾಗಿ 1992ರ ಗಲಭೆ ಪ್ರಕರಣದಲ್ಲಿ ಎ೩ ಆರೋಪಿಯಾಗಿದ್ದರು. ಡಿ.29ರಂದು ಶಹರ ಠಾಣೆಯ ಪೊಲೀಸರು ಬಂಧಿಸಿ ಶ್ರೀಕಾಂತ್​ನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

RELATED ARTICLES

Related Articles

TRENDING ARTICLES