Sunday, January 19, 2025

ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಕಾರು ಅಪಘಾತ

ಕಲಬುರಗಿ : ಅಫಜಲಪುರ ತಾಲೂಕಿನ ಜೇವರ್ಗಿ ಗ್ರಾಮದ ಸಮೀಪದ ರಸ್ತೆಯಲ್ಲಿ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೇವರ್ಗಿ ಗ್ರಾಮದ ಹೊರವಲಯದಲ್ಲಿ ರಸ್ತೆ ಟರ್ನ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗುಗುಂಡಿಗೆ ಕಾರು ಬಿದ್ದಿದೆ. ಈ ವೇಳೆ ಶಾಸಕ ಎಂ.ವೈ. ಪಾಟೀಲ್‌ ಹಾಗೂ ಚಾಲಕ ಮೋಹಿನ್‌ಗೆ ಸಣ್ಣಪುಟ್ಟ ಗಾಯಾವಾಗಿದೆ.

ಕೂಡಲೇ ಗಾಯಾಳನ್ನ ಡಾ. ಸಂಜೀವ್‌ರವರ ಶಾಂತಾಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES