Tuesday, August 26, 2025
Google search engine
HomeUncategorizedಯುವನಿಧಿ ಯೋಜನೆಗೆ ಈವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ ಎಷ್ಟು ಗೊತ್ತಾ?

ಯುವನಿಧಿ ಯೋಜನೆಗೆ ಈವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ ಎಷ್ಟು ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಗ್ಯಾರೆಂಟಿಯಾಗಿರುವ ಯುವನಿಧಿಗೆ ಅರ್ಜಿಸಲ್ಲಿಕೆ ಪ್ರಾರಂಭವಾಗಿ ಸುಮಾರು 10 ದಿನಗಳು ಕಳೆದಿವೆ. ಈ 10 ದಿನಗಳಲ್ಲಿ ಇಲ್ಲಿಯವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ ಎಂದು ಕಾರ್ಮಿಕ ಇಲಾಖೆ ಮಾಹಿತಿ ನೀಡಿದೆ.

ಇದುವರೆಗೆ ಕೇವಲ 32,184 ಅರ್ಜಿಗಳು ಸಲ್ಲಿಕೆಯಾಗಿವೆ. ಅಂದರೆ ಶೇ 6 ಪ್ರತಿಶತದಷ್ಟು ಅರ್ಹ ಫಲಾನುಭವಿಗಳು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ 2023 ರಲ್ಲಿ ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಅವಧಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.

ಇದನ್ನೂ ಓದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆ ಸಾಧ್ಯತೆ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಬೆಳಗಾವಿ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಬೆಳಗಾವಿಯಲ್ಲಿ 3,900 ಅರ್ಜಿಗಳು ಸಲ್ಲಿಕೆಯಾಗಿದ್ದು, ಬೆಂಗಳೂರು ನಗರದಲ್ಲಿ 2,853 ಅರ್ಜಿಗಳು ಸಲ್ಲಿಕೆಯಾಗಿವೆ. ಮೂರನೇ ಅತಿ ಹೆಚ್ಚು ಅರ್ಜಿ ಸಲ್ಲಿಕೆ ಬಾಗಲಕೋಟೆ 1,943, ನಂತರದ ಸ್ಥಾನದಲ್ಲಿ ವಿಜಯಪುರ 1,741 ಮತ್ತು ರಾಯಚೂರು 1,714 ಜಿಲ್ಲೆಗಳಿವೆ. ಉಡುಪಿ 236, ಕೊಡಗು 120, ಚಾಮರಾಜನಗರ 237 ಮತ್ತು ರಾಮನಗರ ಜಿಲ್ಲೆಯಲ್ಲಿ 329 ಅರ್ಜಿಗಳು ಸಲ್ಲಿಕೆಯಾಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments