Sunday, December 22, 2024

ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕ ಅಸಭ್ಯ ವರ್ತನೆ; ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ಆರೋಪ ಹಿನ್ನೆಲೆ ABVP ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಉಪನ್ಯಾಸಕ ಶಂಕರ್​ ವಿರುದ್ದ ಅಸಭ್ಯ ವರ್ತನೆ ಆರೋಪ ಕೇಳಿಬಂದಿದ್ದು, ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸಿದರು. ಫಿಸಿಕ್ಸ್ ವಿಭಾಗದ ಲೆಕ್ಚರ್​​ರಿಂದ ಅಸಭ್ಯ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ವಿದ್ಯಾರ್ಥಿಗಳು ಉಪನ್ಯಾಸಕ ಶಂಕರ್ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಬರಪರಿಹಾರ ಬಿಡುಗಡೆ ವಿಳಂಬಕ್ಕೆ ಕಾರಣ ರಾಜ್ಯ ಸರ್ಕಾರವಲ್ಲ ಕೇಂದ್ರ ಸರ್ಕಾರ: ಸಿಎಂ

ವಿದ್ಯಾರ್ಥಿಗಳು ಉಪನ್ಯಾಸಕ ಶಂಕರ್​​ಗೆ ಕಾಲೇಜಿನಿಂದ ಅಮಾನತ್ತು ಮಾಡುವಂತೆ ಆಗ್ರಹಿಸಿದ್ದಾರೆ. ಶಂಕರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES