Thursday, November 21, 2024

12,000 ಲಂಚ : ರಾಣೆಬೆನ್ನೂರಿನ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಹಾವೇರಿ : 12 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ರೆಡ್​ ಹ್ಯಾಂಡ್​ ಆಗಿ ರಾಣೆಬೆನ್ನೂರಿನ ತಹಶೀಲ್ದಾರ್ ಮತ್ತು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಹಶೀಲ್ದಾರ್ ಹನುಮಂತ ಶಿರಹಟ್ಟಿ ಹಾಗೂ ಜೀಪ್ ಚಾಲಕ ಮಾಲತೇಶ ಮಡಿವಾಳರ ಸಿಕ್ಕಿಬಿದ್ದ ಆರೋಪಿಗಳು. ಅಕ್ರಮ ಸಾಗಣೆ ಮಾಡುತ್ತಿದ್ದ ಮರಳು ತುಂಬಿದ ಎರಡು ಲಾರಿಗಳನ್ನು ಬಿಡಲು ಇವರು ಲಂಚ ಪಡೆಯುತ್ತಿದ್ದರು.

ಜೀಪ್ ಚಾಲಕ ಮಾಲತೇಶ ಲಂಚ ಪಡೆದುಕೊಂಡು ರಾಣೆಬೆನ್ನೂರು ನಗರದ ವೀರಭದ್ರೇಶ್ವರ ಬಡಾವಣೆಯಲ್ಲಿರುವ ತಹಶೀಲ್ದಾರ್ ಮನೆಯಲ್ಲಿ ಹನುಮಂತ ಶಿರಹಟ್ಟಿ ಅವರಿಗೆ ಕೊಡುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ರಾಣೆಬೆನ್ನೂರಿನ ಮಂಜುನಾಥ ವಾಲೀಕಾರ ಅವರಿಗೆ ಸೇರಿದ ಎರಡು ಲಾರಿಗಳು ಅಕ್ರಮ ಮರಳು ಸಾಗಣೆ ಮಾಡುತ್ತಿವೆ ಎಂಬ ಆರೋಪದ ಮೇರೆಗೆ ಈಚೆಗೆ ವಶಕ್ಕೆ ಪಡೆಯಲಾಗಿತ್ತು. ಎರಡು ಲಾರಿಗಳ ಬಿಡುಗಡೆಗೆ ತಹಶೀಲ್ದಾರ್ ಅವರು 12 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

RELATED ARTICLES

Related Articles

TRENDING ARTICLES