Wednesday, January 22, 2025

ಸಿಎಂ,ಡಿಸಿಎಂ ಇಲ್ಲದ ವೇಳೆ ಸಚಿವರ ರಹಸ್ಯ ಸಭೆ!

ಬೆಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತೆ ರಹಸ್ಯ ಸಭೆ ನಡೆಸಿದ್ದಾರೆ.

ಗುರುವಾರ ರಾತ್ರಿ ಡಾ.ಜಿ ಪರಮೇಶ್ವರ್ ಅವರ ಸದಾಶಿವನಗರದ ನಿವಾಸದಲ್ಲಿ ಭೋಜನಕೂಟದ ನೆಪದಲ್ಲಿ ಮೂವರು ಸಚಿವರು ರಹಸ್ಯ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ ಸಂದರ್ಭದಲ್ಲಿ, ಅವರ ಅನುಪಸ್ಥಿತಿಯಲ್ಲಿ ಮೂವರೂ ಸಚಿವರು ಭೋಜನಕೂಟ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಯುವನಿಧಿ ಯೋಜನೆಗೆ ಈವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ ಎಷ್ಟು ಗೊತ್ತಾ?

ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳಿರಬೇಕು ಎಂದು ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ಭೋಜನಕೂಟ ಮತ್ತು ರಹಸ್ಯ ಸಭೆಗೆ ಮಹತ್ವ ಬಂದಂತಾಗಿದೆ.

RELATED ARTICLES

Related Articles

TRENDING ARTICLES