Wednesday, January 22, 2025

Killer Bmtc: ಕಿಲ್ಲರ್ BMTCಗೆ ವ್ಯಕ್ತಿ ಬಲಿ!

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕಿಲ್ಲರ್‌ ಬಿಎಂಟಿಸಿ​ಗೆ ಮತ್ತೊಂದು ಬಲಿಯಾಗಿದೆ.

ಹೌದು,ಬಿಎಂಟಿಸಿಗೆ ಬಸ್ಸಿಗೆ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಎಳಂಗೋವನ್ ಸೆಂಕತ್ತವಲ್ (43) ಮೃತ ದುರ್ದೈವಿಯಾಗಿದ್ದಾಳೆ.

ಜ.6ರಂದು ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್‌ ಸವಾರ ತೆರಳುತಿದ್ದ, ಅದೇ ಮಾರ್ಗದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಬರುತ್ತಿತ್ತು.

 

 

ಈ ವೇಳೆ ವೋಲ್ವೋ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಸೇರುವ ಮೊದಲೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಎಚ್‌ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್‌ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

RELATED ARTICLES

Related Articles

TRENDING ARTICLES