Monday, December 23, 2024

ಸಲಾರ್​ ಸ್ಪ್ಯಾನಿಷ್​ ಭಾಷೆಯಲ್ಲಿ ರಿಲೀಸ್​ ಗೆ ಸಿದ್ದತೆ!

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್ ನಟನೆಯ ಸಲಾರ್​ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿಯುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಸ್ಪ್ಯಾನಿಷ್ ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಸಂಸ್ಥೆ ತಿಳಿಸಿದೆ.
ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿಗೂ ಅಧಿಕ ಮೊತ್ತ ಗಳಿಸಿ,  ತನ್ನ ನಾಗಾಲೋಟವನ್ನು ಮುಂದುವರೆಸಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿದ್ದು. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ.

 

ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಕೂಡ ಶುರು ಮಾಡಲಿದ್ದಾರಂತೆ. ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES