Tuesday, August 26, 2025
Google search engine
HomeUncategorizedಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಅವರನ್ನು ಭೇಟಿಮಾಡಿದ ಸ್ವಾಮೀಜಿಗಳು ಈ ಮನವಿ ಸಲ್ಲಿಸಿದರು. ಇದೇ ವೇಳೆ ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ವರದಿ ನೀಡಲು ಎರಡು ತಿಂಗಳಕಾಲ ಅವಧಿ ವಿಸ್ತರಣೆಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದರು.

ಇದನ್ನೂ ಓದಿ: NPS ರದ್ದತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

ಈ ಸಂದರ್ಭದಲ್ಲಿ ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ , ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments