ಬೆಂಗಳೂರು: ಹಿಂದು ಕಾರ್ಯಕರ್ತ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿರುದ್ದ ತಮ್ಮ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
ಪುನೀತ್ ಕೆರೆಹಳ್ಳಿಯನ್ನು ಬಿಜೆಪಿಯವರು ದೊಂಬಿ, ಗಲಾಟೆ ಮಾಡುವುದಕ್ಕೆ ಬಳಸಿಕೊಳ್ಳುತ್ತಾರೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಅಲ್ಲದೆ, ಪುನೀತ್ ಕೆರೆಹಳ್ಳಿ ನಂಬರ್‌ನಲ್ಲಿ ನಕಲಿ ಸಂದೇಶ ಹರಿಬಿಡಲಾಗಿದೆ ಎಂದು ಸಹ ದೂರು ನೀಡಲಾಗಿದೆ.
ಇದನ್ನೂ ಓದಿ: BMTC ಮತ್ತು KSRTC ಬಸ್ ಕಂಡಕ್ಟರ್ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಇಲಾಖೆ!
ಈ ಹಿನ್ನೆಲೆ ಬಿ.ಕೆ. ಹರಿಪ್ರಸಾದ್ ಹೇಳಿಕೆ ವಿರುದ್ಧ ಕ್ರಮ ಜರಗಿಸಬೇಕು. ಅವರು ಈಗ ಮಾಡಿರುವ ಕೆಲಸದಿಂದ ರಾಜ್ಯದ ಬೇರೆ ಬೇರೆ ಕಡೆಯಿಂದ ಮುಸ್ಲಿಂಮರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನೂ, ಪುನೀತ್ ಕೆರೆಹಳ್ಳಿ ದೂರು ದಾಖಲಿಸಿದ ಬೆನ್ನಲ್ಲೇ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಯುವ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲಾಗಿದೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ.
ರೌಡಿ ಶೀಟರ್ ಆಗಿರುವ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ… pic.twitter.com/V9Ecqicxkg
— IYC Karnataka (@IYCKarnataka) January 7, 2024