Wednesday, January 22, 2025

ಕರವೇ ಅಧ್ಯಕ್ಷ ನಾರಾಯಣಗೌಡ ಗೆ ಜಾಮೀನು ಸಿಕ್ಕಿದರೂ ತಪ್ಪದ ಸಂಕಷ್ಟ!

ಬೆಂಗಳೂರು: ಆಂಗ್ಲ ಬೋರ್ಡ್ ವಿರುದ್ದ ಸಮರ ಸಾರಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಸಿಕ್ಕಿದ್ದರು ಸಹ ಬಿಡುಗಡೆ ಭಾಗ್ಯವಿಲ್ಲ ಇಂದು ಭಾನುವಾರವಾದ ಹಿನ್ನೆಲೆ ಸೋಮವಾರ ಬಿಡುಗಡೆ ಮಾಡಲಾಗುತ್ತದೆ.

ಕನ್ನಡ ಉಳಿವಿಗಾಗಿ ಉದ್ಯಮಿಗಳು ತಮ್ಮ ಅಂಗಡಿ ಮುಂಗಟ್ಟುಗಳು ಹಾಗು ಮಾಲ್ ಗಳಲ್ಲಿ ಸರ್ಕಾರದ ನಿಯಮಗಳನ್ನು ಕಡೆಗಣಿಸಿ ಕನ್ನಡವನ್ನು ಮರೆಮಾಚಿದ್ದನ್ನು ವಿರೋಧಿಸಿ ನಾಮಫಲಕಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನವನ್ನು ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸಿದ್ದರು.

ಇದನ್ನೂ ಓದಿ: ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಟರು 

ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರಾಗಿದ್ದರು ಸಂಕಷ್ಟ ತಪ್ಪಿಲ್ಲ. ಏಕೆಂದರೆ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್‌, ಹಲಸೂರು ಗೇಟ್ ಠಾಣೆ ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ.

ಹಿರಿಯ ಅಧಿಕಾರಿಗಳ ಸೂಚನೆಯಂತೆ ನಾರಾಯಣಗೌಡ ವಿರುದ್ಧದ ಹಳೇ ಕೇಸ್​ಗಳನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀಓಪನ್ ಮಾಡಿ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES