Monday, December 23, 2024

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ಮುಡಾ ಆಯುಕ್ತ ಮನ್ಸೂರ್ ಅಲಿ ಮೇಲೆ FIR

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರು ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಈ ಕುರಿತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಉರ್ವ ಠಾಣೆಯಲ್ಲಿ FIR ದಾಖಲಾಗಿದೆ. ಮುಡಾ ಆಯುಕ್ತರಾದ ಮನ್ಸೂರ್​​​ ಆಲಿ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಾಧಿಕಾರದ ಮಹಿಳಾ ಸಿಬ್ಬಂದಿಯೊಬ್ಬರು ದೂರು ನೀಡಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354ರ ಹಾಗೂ 354 ಎ ಅಡಿ ಉರ್ವ ಠಾಣೆಯಲ್ಲಿ FIR ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES