Thursday, December 26, 2024

ಮಂಗನಕಾಯಿಲೆಗೆ 18 ವರ್ಷದ ಯುವತಿ ಬಲಿ

ಶಿವಮೊಗ್ಗ: ಮಂಗನಕಾಯಿಲೆ(ಕೆಎಫ್​ಡಿ)‌ ಸೋಂಕಿನಿಂದ 18 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಇಂದು ಮಣಿಪಾಲ್​ನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಳೆದ ಕೆಲ ದಿನದಿಂದ ಜ್ವರ ಹೆಚ್ಚಾಗಿದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷೆ ಮಾಡಿಸಿದಾಗ ಮಂಗನ ಕಾಯಿಲೆ ನೆಗಟಿವ್ ಎಂದು ಬಂದಿತ್ತು. 2ನೇ ಬಾರಿ ಆರ್​​ಟಿಪಿಸಿಆರ್​ ಟೆಸ್ಟ್ ಮಾಡಿದಾಗ ಕೆಎಫ್​ಡಿ ಪಾಸಿಟಿವ್ ಎಂದು ಬಂದಿದೆ. ಹೀಗಾಗಿ 3 ದಿನ ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಕೆಆರ್‌ಎಸ್‌ನಿಂದ 30 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡುವಂತಿಲ್ಲ; ಹೈಕೋರ್ಟ್‌ ಆರ್ಡರ್‌

ಯುವತಿ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾರೆ. ಇದು ಜಿಲ್ಲೆಯಲ್ಲಿ ಕೆಎಫ್​ಡಿಗೆ ಬಲಿಯಾಗಿರುವುದು ಮೊದಲ ಪ್ರಕರಣವಾಗಿದೆ.

ಕೆಎಫ್​ಡಿ ಶಿವಮೊಗ್ಗ ಜಿಲ್ಲೆಯಲ್ಲಿ 2 ಕೇಸ್ ಸೇರಿದಂತೆ ರಾಜ್ಯದಲ್ಲಿ ಈವರೆಗೆ 3 ಪ್ರಕರಣ ಪತ್ತೆಯಾಗಿವೆ. ಕಳೆದ ಡಿಸೆಂಬರ್​ನಲ್ಲಿ ಪ್ರಸಕ್ತ ಸಾಲಿನ ಮೊದಲ ಕೇಸ್ ತೀರ್ಥಹಳ್ಳಿಯಲ್ಲಿ ಪತ್ತೆಯಾಗಿತ್ತು.

 

RELATED ARTICLES

Related Articles

TRENDING ARTICLES