Sunday, December 29, 2024

ಬಾಂಗ್ಲಾ ಚುನಾವಣೆ: 5ನೇ ಅವಧಿಗೆ ಪ್ರಧಾನಿಯಾಗಿ ಮರು ಆಯ್ಕೆಯಾದ ಶೇಖ್‌ ಹಸೀನಾ

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥ ಶೇಖ್ ಹಸೀನಾ ಅವರು ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರಿ ಮತಗಳ ಅಂತರದಿಂದ ತಮ್ಮ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಪ್ರಮುಖ ವಿರೋಧ ಪಕ್ಷವಾದ ಬಿಎನ್‌ಪಿ ಮತ್ತು ಅದರ ಮಿತ್ರ ಪಕ್ಷಗಳ ಚುನಾವಣಾ ಬಹಿಷ್ಕಾರದ ನಡುವೆಯೂ ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಪಕ್ಷವು ಅಭೂತಪೂರ್ವ ಬಹುಮತವನ್ನು ಗಳಿಸಿದೆ. ಇದರೊಂದಿಗೆ ಪ್ರಧಾನಿ ಶೇಖ್ ಹಸೀನಾ ಅವರು ಸತತ ಐದನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಲಿದ್ದಾರೆ.

ಬಾಂಗ್ಲಾ ಸಂಸತ್‌ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆದಿತ್ತು. ಈ ಪೈಕಿ ಹಸೀನಾ ನೇತೃತ್ವದ ಪಕ್ಷವು 223 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಕ್ಷವು (ಬಿಎನ್‌ಪಿ) ಕೇವಲ 11 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೀವ್ರ ಹಿನ್ನಡೆ ಕಂಡಿದೆ. ಬಾಂಗ್ಲಾದೇಶ ಕಲ್ಯಾಣ್ ಪಕ್ಷ, ಜಾತಿಯಾ ಸಮಾಜತಾಂತ್ರಿಕ್ ದಳ ಮತ್ತು ದಿ ವರ್ಕಸ್್ರ ಪಕ್ಷಗಳು ತಲಾ ಒಂದೊಂದು ಕ್ಷೇತ್ರದಲ್ಲಿ ಗೆದ್ದಿದ್ದರೆ, ಪಕ್ಷೇತರ ಅಭ್ಯರ್ಥಿಗಳು 62 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದಾರೆ.

ಸತತ 4ನೇ ಹಾಗೂ ಒಟ್ಟು 5ನೇ ಬಾರಿಗೆ ಪ್ರಧಾನಿ

ಇತ್ತೀಚಿನ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನೊಂದಿಗೆ 76 ವರ್ಷದ ಶೇಖ್ ಹಸೀನಾ ಅವರು ಸತತ ನಾಲ್ಕನೇ ಬಾರಿಗೆ ಮತ್ತು ಒಟ್ಟು ಐದನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ವಿರೋಧ ಪಕ್ಷಗಳು ಚುನಾವಣೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗಳನ್ನು ಆಯೋಜಿಸಿದ್ದರಿಂದ ಬಾಂಗ್ಲಾದೇಶದಾದ್ಯಂತ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಹಾಗಾಗಿ ಚುನಾವಣೆಯಲ್ಲಿ ಕೇವಲ ಶೇ.40ರಷ್ಟು ಮತದಾನ ಮಾತ್ರ ದಾಖಲಾಗಿದೆ. ಆದರೆ ಸಂಪೂರ್ಣ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES