Wednesday, January 22, 2025

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಸಚಿವ ಜಿ.ಪರಮೇಶ್ವರ್‌ 

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು,ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಕೂಡಾ ದೇಣಿಗೆ ನೀಡಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು. ಅಯೋದ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ.

ಇದನ್ನೂ ಓದಿ: PSI Re-Exam: PSI ಪರೀಕ್ಷಾ ಮಾರ್ಗಸೂಚಿ ಪ್ರಕಟ: ಅಭ್ಯರ್ಥಿಗಳು ಕಟ್ಟನಿಟ್ಟಾಗಿ ಈ ನಿಯಮ ಪಾಲಿಸಲೇಬೇಕು!

ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ನಾವು ಹಿಂದುಗಳಲ್ಲವೇ. ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ’ ಎಂದು ಪ್ರಶ್ನಿಸಿದರು.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು.

 

 

RELATED ARTICLES

Related Articles

TRENDING ARTICLES