Tuesday, November 5, 2024

ಬಿಜೆಪಿಗೆ ಸನ್ಮತಿ ದೇ ಭಗವಾನ್ : ಕಾಂಗ್ರೆಸ್ ಲೇವಡಿ

ಬೆಂಗಳೂರು : ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜೆಪಿಗೆ ‘ಸನ್ಮತಿ ದೇ ಭಗವಾನ್’ ಅಂತ ಹೇಳಬೇಕಾಗಿ ಬಂದಿರೋದು ದುರಂತ ಎಂದು ಕಾಂಗ್ರೆಸ್​ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​, ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎಂದು ಕುಟುಕಿದೆ.

ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ‘ಹೇ ರಾಮ್..!’ ಆಗ ಬಿಜೆಪಿ ಹುಟ್ಟೇ ಇರಲಿಲ್ಲ. ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಚಾಟಿ ಬೀಸಿದೆ.

ರಾಮನ ಪೂಜೆಗೆ ಅವಕಾಶ ಕೊಟ್ಟಿದ್ದೇ ಗಾಂಧಿ

1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989 ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್​ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ ಎಂದು ಬಿಜೆಪಿಗೆ ಕಾಂಗ್ರೆಸ್​ ಟಕ್ಕರ್ ಕೊಟ್ಟಿದೆ.

RELATED ARTICLES

Related Articles

TRENDING ARTICLES