Wednesday, January 22, 2025

ಸತೀಶ್ ಜಾರಕಿಹೊಳಿ ಊಸರವಳ್ಳಿ ಇದ್ದಂತೆ: ಯತ್ನಾಳ್

ಬೆಂಗಳೂರು: ಊಸರವಳ್ಳಿಯ ರೀತಿ ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ರಾಜಕಾರಣಿಗಳಿಂದಲೇ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಮರೀಚಿಕೆ ಆಗಿರುವುದು ಸತೀಶ್​ ಜಾರಕಿಹೊಳಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ

ಈ ಕುರಿತು ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಡಿಸಿರುವ ಅವರು ‘ವ್ಯಕ್ತಿ ಪೂಜೆ ಮಾಡೋದಿಲ್ಲ, ದೇವರಲ್ಲಿ ನಂಬಿಕೆಯಿಲ್ಲ, ಹಿಂದೂ ಪೂಜೆಗಳಲ್ಲಿ, ಆಚರಣೆಗಳಲ್ಲಿ ನಂಬಿಕೆ ಇಲ್ಲದವರು ರಾಜಕೀಯ ಅಸ್ತಿತ್ವಕ್ಕಾಗಿ ಸಿದ್ದರಾಮಯ್ಯನವರನ್ನು ತಮ್ಮ ‘ಮನೆ ದೇವ’ರಾಗಿ ಮಾಡಿಕೊಂಡಿರುವ ನೀವು ಎಂತಹ ಅವಕಾಶವಾದಿಗಳು ಎಂದು ಜನತೆಗೆ ಗೊತ್ತಾಗುತ್ತಿದೆ ಎಂದು ಯತ್ನಾಳ್ ಉಲ್ಲೇಖಿಸಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಹುಕ್ಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಎಲ್ಲ ಕಾರ್ಯಕರ್ತರಂತೆ ನಾನೂ ಸಹ ಸಿಎಂ ಸಿದ್ದರಾಮಯ್ಯ ಅವರನ್ನು ದೇವರಂತೆ ನೋಡುತ್ತೇನೆ. ಕಾರ್ಯಕರ್ತರು ಅವರವರ ನಾಯಕರನ್ನು ಭಕ್ತಿಯಿಂದ ದೇವರಂತೆ ಕಾಣುತ್ತಾರೆ. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದರು.

 

 

 

RELATED ARTICLES

Related Articles

TRENDING ARTICLES