ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಮನವಿ ಸಲ್ಲಿಸಿದರು.
ಇಂದು ರಾಜ್ಯಪಾಲರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡರು ರಾಜ್ಯದಲ್ಲಿ ಈಗಾಗಲೇ ಮಳೆ ಕಡಿಮೆಯಾಗಿ ಬರಗಾಲ ತಾಂಡವವಾಡುತ್ತಿದೆ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದೆ ಇದರಿಂದ ರಾಜ್ಯದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಅಭಿಪ್ರಾಯ ಪಟ್ಟರು.
ಇದನ್ನೂ ಓದಿ: ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ!
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಮಾಜಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಕೆ. ಗೋಪಾಲಯ್ಯ, ಶಾಸಕಾರದ ಎಸ್ ರಘು, ರವಿ ಸುಬ್ರಮಣ್ಯ, ಕೆ. ರಾಮಮೂರ್ತಿ ಹಾಜರಿದ್ದರು.