Thursday, January 23, 2025

ರಾಜ್ಯಪಾಲ ಗೆಹ್ಲೋಟ್ ಶೀಘ್ರ ಗುಣಮುಖರಾಗಲಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ದೃಢಪಟ್ಟಿದ್ದು, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೊರೋನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.

ವಿಪಕ್ಷ ನಾಯಕ ಆರ್. ಅಶೊಕ್​ ಅವರು ಸಹ ಟ್ವೀಟ್​ ಮಾಡಿದ್ದಾರೆ. ಸನ್ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ಕಾರ್ಯೋನ್ಮುಖರಾಗಲೆಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು, ಕೊರೋನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಬೆಳಗ್ಗೆ ರಾಜ್ಯಪಾಲರ ಭೇಟಿ, ಸಂಜೆ ಕೊರೋನಾ

ಬಿಜೆಪಿ ನಾಯಕರು ಇಂದು ಬೆಳಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ಬರ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯದ ಬಗ್ಗೆ ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.

RELATED ARTICLES

Related Articles

TRENDING ARTICLES