Thursday, January 23, 2025

ರಾಜ್ಯಪಾಲ ಗೆಹ್ಲೋಟ್​ಗೆ ಕೊರೋನಾ ಸೋಂಕು ದೃಢ

ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಸೋಂಕು ದೃಢಪಟ್ಟ ಕಾರಣ ಅವರು ರಾಜಭವನದಲ್ಲೇ ಕ್ವಾರಂಟೈನ್ ಅಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರ ನಿಗದಿತ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

ನಿನ್ನೆ ರಾಜ್ಯದಲ್ಲಿ 279 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದರು. ಮೈಸೂರು ಜಿಲ್ಲೆ ಇಬ್ಬರು ಹಾಗೂ ಬೆಂಗಳೂರಿನಲ್ಲಿ ಒಂದು ಸಾವು ಪ್ರಕರಣ ದಾಖಲಾಗಿತ್ತು.

40,383 ಮಂದಿ ಸೋಂಕಿನಿಂದ ಮೃತ

ಬೆಂಗಳೂರಿನಲ್ಲಿ 134 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6,359 ಜನರನ್ನು ಕೊವೀಡ್ ಟೆಸ್ಟ್​ಗೆ ಒಳಪಡಿಸಲಾಗಿದ್ದು, 279 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈವರೆಗೆ ರಾಜ್ಯದಲ್ಲಿ 40,383 ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES