Sunday, December 22, 2024

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!

ಬೆಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣ ಪಿಡಿಒ ಪದ್ಮನಾಬ್ ಅವರಿ​ಗೆ ಸೇರಿದ​​​​ ಮೂರು ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಜೊತೆಗೆ ದಾಬಸ್​ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್​ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಲೋಕಾಯುಕ್ತ ಅಧಿಕಾರಿಗಳು ಒಟ್ಟು ಏಳು ಕಡೆ ದಾಳಿ ಮಾಡಿದ್ದೂ ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಶೋಧ ನಡೆಸಿದ್ದಾರೆ.

ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಅವರು ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೃತ ಅಭಿಮಾನಿಗಳ ಕುಟುಂಬದ ಜೊತೆ ನಾನಿದ್ದೇನೆ ಯಶ್ ಭರವಸೆ​!

ಇನ್ನು ಮಂಡ್ಯ ಜಿಲ್ಲೆಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿ ಮಂಜೇಶ್ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ‌‌ ರೇಡ್ ಮಾಡಲಾಗಿದೆ. ಮಂಜೇಶ್ ಸಂಬಂಧಿ ಸುರೇಂದ್ರಗೆ ಸೇರಿದ ​​ಮಳವಳ್ಳಿ ತಾಲೂಕಿನ ಹಲಗೂರು, ಗುಂಡಾಪುರ ಗ್ರಾಮದ ಮನೆಗಳ ಮೇಲೆ ಮತ್ತು ಮಂಜೇಶ್ ಅಜ್ಜಿ ವಾಸಿಸುವ ಮದ್ದೂರು ತಾಲೂಕಿನ ಎಸ್.ಐ.ಕೋಡಿಹಳ್ಳಿಯಲ್ಲಿ‌ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES