Monday, December 23, 2024

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾದ ಸ್ಟಾರ್‌ ವೇಗದ ಬೌಲರ್‌ ಮೊಹಮ್ಮದ್‌ ಶಮಿ

ದೆಹಲಿ: ರಾಷ್ಟ್ರಪತಿ ದೌಪದಿ ಮುರ್ಮು ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿ ಅವರಿಗೆ ಇಂದು ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು.

ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮುಹಮ ಶಮಿ ಅವರ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು.

ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್ ಗಳನ್ನು ಕಬಳಿಸುವ ಮೂಲಕ ಶಮಿ ತಮ್ಮ ಏಕದಿನ ವಿಶ್ವಕಪ್ 2023 ಯಾತ್ರೆ ಅನ್ನು ಯಶಸ್ವಿಯಾಗಿ ಮುಗಿಸಿದ್ದರು. “ಈ ಪ್ರಶಸ್ತಿಯು ನನ್ನ ಕನಸಾಗಿತ್ತು. ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿಸಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ.

ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಪ್ರಶಸ್ತಿ ಪ್ರದಾನ ಸಮಾರಂಭದ ಪ್ರಾರಂಭಕ್ಕೂ ಮುನ್ನ ಮುಹಮ್ಮದ್ ಶಮಿ ಸಂತಸ ವ್ಯಕ್ತಪಡಿಸಿದರು.

 

RELATED ARTICLES

Related Articles

TRENDING ARTICLES