Wednesday, January 22, 2025

ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೆ ನಟ ನಿಖಿಲ್‌ಗೆ ಆಹ್ವಾನ

ಬೆಂಗಳೂರು: ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೆ ನಟ ನಿಖಿಲ್‌ ಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 2024ರ ಜನವರಿ 22ರಂದು ರಾಮ ಮಂದಿರ (Ram Mandir) ಉದ್ಘಾಟನೆಯಾಗಲಿದೆ. ಈ ‘ಪ್ರಾಣ ಪ್ರತಿಷ್ಠಾ’ (Pran Pratistha-ಪ್ರತಿಷ್ಠಾಪನಾ ಸಮಾರಂಭ) ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ಸ್ಯಾಂಡಲ್‌ವುಡ್‌ನ ಯಶ್‌ ಹಾಗೂ ರಿಷಬ್‌ ಶೆಟ್ಟಿ ಅವರಿಗೆ ರಾಮಮಂದಿರ ಟ್ರಸ್ಟ್‌ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ. ಇನ್ನು ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ. ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಅವರೊಂದಿಗೆ ಚಿರಂಜೀವಿ ಅವರು ಕೂಡ ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಸುಮಾರು 4 ಸಾವಿರ ಸಂತರು ಪಾಲ್ಗೊಳ್ಳಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ಸುಮಾರು 10-15 ಸಾವಿರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

 

RELATED ARTICLES

Related Articles

TRENDING ARTICLES