Tuesday, December 24, 2024

ರಾಮಮಂದಿರ ಉದ್ಘಾಟನೆಗೆ ನಾವು ಹೋಗಲ್ಲ : ಕಾಂಗ್ರೆಸ್ ಘೋಷಣೆ

ನವದೆಹಲಿ : ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಕಾಂಗ್ರೆಸ್​ ನಿರ್ಧರಿಸಿದೆ ಎಂದು ವರದಿಯಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್​​​ ನಾಯಕಿ ಸೋನಿಯಾ ಗಾಂಧಿ, ವಿಪಕ್ಷ ನಾಯಕ ಅಧೀರ್ ರಂಜನ್ ಅವರು ರಾಮಮಂದಿರ ಟ್ರಸ್ಟ್ ನಿಡಿದ್ದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬಿಜೆಪಿ ಪ್ರಾಯೋಜಿತವಾಗಿದೆ. ಈ ಹಿನ್ನೆಲೆ ನಾವು ಯಾರೂ ಜ.22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ತೆರಳುವುದಿಲ್ಲ ಎಂದು ಕಾಂಗ್ರೆಸ್​ ನಾಯಕರು ಸ್ಪಷ್ಟಪಡಿಸಿದ್ದಾರೆ. ಈ ನಿರ್ಧಾರದ ಹಿಂದೆ ವೋಟ್​ ಬ್ಯಾಂಕ್ ರಾಜಕಾರಣದ ಲೆಕ್ಕಾಚಾರ ಜೋರಾಗಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.

RELATED ARTICLES

Related Articles

TRENDING ARTICLES