ಅಯೋಧ್ಯೆ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ರಾಮಮಂದಿರಕ್ಕೆ ಚಿನ್ನ ಲೇಪಿತ ಬಾಗಿಲನ್ನು ಅಳವಡಿಸಲಾಗಿದ್ದು,ಮುಂದಿನ ಮೂರು ದಿನಗಳಲ್ಲಿ ಇನ್ನೂ 13 ಬಾಗಿಲುಗಳನ್ನು ಅಳವಡಿಸಲಾಗುವುದು.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ದೇವಾಲಯದ ಚಿನ್ನದ ಲೇಪಿತ ಬಾಗಿಲುಗಳ ಮೊದಲ ಚಿತ್ರ ಮಂಗಳವಾರ ಹೊರಬಿದ್ದಿದೆ.
ಇದನ್ನೂ ಓದಿ: ಮೋದಿ ಹೆಜ್ಜೆ ಹೆಜ್ಜೆಗೂ ಅನ್ಯಾಯ ಮಾಡುತ್ತಿದ್ದಾರೆ : ಡಿ.ಕೆ. ಶಿವಕುಮಾರ್
ದೇವಾಲಯದ ಗರ್ಭಗುಡಿಯಲ್ಲಿ ಚಿನ್ನದ ಲೇಪಿತ ಬಾಗಿಲುಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ದೇವರ ವಿಗ್ರಹವನ್ನು ಜನವರಿ 22 ರಂದು ಪ್ರತಿಷ್ಠಾಪಿಸಲಾಗುವುದು. ಹೈದರಾಬಾದ್ ಮೂಲದ ಕುಶಲಕರ್ಮಿಯೊಬ್ಬರು ಬಾಗಿಲನ್ನು ರೂಪಿಸಿದ್ದಾರೆ.
ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ರಾಮಮಂದಿರ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರ ಇರಲಿದೆ. ದೇವಾಲಯದ ಪ್ರತಿಯೊಂದು ಮಹಡಿಯು 20 ಅಡಿ ಎತ್ತರವಿದ್ದು, ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿದೆ. ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಸುಮಾರು 7,000 ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.