ಬೆಂಗಳೂರು: ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯಿಂದ ರಾಮ ಭಕ್ತರಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ.
ಹೌದು,ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರ ಉದ್ಘಾಟನೆ ಹೊತ್ತಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶಕ್ಕೆ ಪತ್ರ ಬರೆದಿದೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ಯಾತ್ರಿ ನಿವಾಸ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಅತಿಥಿಗೃಹ ನಿರ್ಮಾಣ ಕೋರಿ ಅರ್ಜಿ ಉತ್ತರಪ್ರದೇಶ ಸರ್ಕಾರಕ್ಕೆ ರಾಜ್ಯ ಮುಜರಾಯಿ ಇಲಾಖೆಯಿಂದ ಪತ್ರ ಯಾತ್ರಿಗಳ ವಾಸ್ತವ್ಯ, ಊಟದ ವ್ಯವಸ್ಥೆಗಾಗಿ ಅತಿಥಿಗೃಹ ನಿರ್ಮಾಣ 10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅತಿಥಿ ಗೃಹ ನಿರ್ಮಾಣಕ್ಕೆ ಮನವಿ ಸರಯೂ ನದಿ ಬಳಿ ಅತಿಥಿ ಗೃಹ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ.
ಇದನ್ನೂ ಓದಿ: Road Accident: ಟಾಟಾ ಏಸ್, ಬೈಕ್ ಮಧ್ಯೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು
ಈಗಾಗಲೇ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರದಿರುವ ರಾಜ್ಯಸರ್ಕಾರ ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಸಹ ಪತ್ರವನ್ನ ಬರೆದು ಮನವಿ ಮಾಡಿದ್ರು. 2020ರಲ್ಲಿ ಯುಪಿ ಸಿಎಂಗೆ ಯಡಿಯೂರಪ್ಪ ಕೂಡ ಪತ್ರ ಬರೆದು ಮನವಿ ಮಾಡಿದರು. ಇನ್ನು ಈಗ ರಾಜ್ಯದ ಮನವಿಗೆ ಯುಪಿ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿಯನ್ನ ಮುಜರಾಯಿ ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಮುಂದಾಗಿದೆ ಅಂತ ತಿಳಿಸಿದೆ