Friday, December 27, 2024

Road Accident: ಟಾಟಾ ಏಸ್, ಬೈಕ್​​ ಮಧ್ಯೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು

ಹಾಸನ: ಟಾಟಾ ಎಸಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಗರೆ ಸಮೀಪದಲ್ಲಿ ಘಟನೆ ನಡೆದಿದೆ.ಮಲ್ಲಿಕಾರ್ಜುನಪುರ ಗ್ರಾಮದ ದರ್ಶನ್ (22) ಮೃತ ಯುವಕ.

ಇದನ್ನೂ ಓದಿ: ಮುಸ್ಲಿಮರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಪೂಜೆ

ಟಾಟಾ ಎಸಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿದಿದೆ.

 

RELATED ARTICLES

Related Articles

TRENDING ARTICLES