Sunday, December 22, 2024

ಶ್ರೀರಾಮನ ಸೇವೆಗಾಗಿ ಬೆಳ್ಳಿಯ ಪೂಜಾ ಸಾಮಗ್ರಿ ಸಮರ್ಪಿಸುತ್ತಿದ್ದೇವೆ : ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಶ್ರೀರಾಮನ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸುತ್ತಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಯೋಧ್ಯೆಯಲ್ಲಿ ಮತ್ತೆ ಶ್ರೀರಾಮ ವೈಭವ ಮರುಕಳಿಸುತ್ತಿರುವುದು ಅತ್ಯಂತ ಸಂತೋಷವನ್ನು ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣವಾಗುವ ಮೂಲಕ ಸಾಕಾರಗೊಂಡಿದೆ ಎಂದು ಬಣ್ಣಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ನಾನೂ ರಾಮ ಭಕ್ತ, ರಾಮನನ್ನ ಮನೆ ದೇವರು ಅಂತ ಪೂಜಿಸ್ತೇನೆ : ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

ಪ್ರಧಾನಿ ಮೋದಿಗೆ ಅಭಿನಂದಿಸುತ್ತೇನೆ

ಈ ದಿನ (ಜನವರಿ 22) ಐತಿಹಾಸಿಕವಾಗಿದೆ ಮತ್ತು ಭಾವನಾತ್ಮಕವಾಗಿ ಕೋಟ್ಯಂತರ ಭಕ್ತರ ಪಾಲಿಗೆ ಸದಾ ಅವಿಸ್ಮರಣೀಯವಾಗಿದೆ. ಈ ಮಹತ್ ಕಾರ್ಯದ ನೇತೃತ್ವ ವಹಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ ಎಂದು ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES